ಮೂಡುಬಿದಿರೆ:ಅಪ್ರಾಪ್ತೆಯನ್ನು ಅತ್ಯಾಚಾವೆಸಗಿದ ಆರೋಪದಲ್ಲಿ ಮಾರ್ಪಾಡಿಯ ಮೀನು ವ್ಯಾಪಾರಿಯನ್ನು ಪೊಲೀಸರು ಬಂಧಿಸಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಬಂಧಿತ ಆರೋಪಿ ಸ್ಥಳೀಯ ನಿವಾಸಿ ಆಸಿಫ್ ಎಂದು ತಿಳಿದುಬಂದಿದೆ. ಈತ ವೃತ್ತಿಯಲ್ಲಿ ಮೀನುವ್ಯಾಪಾರಿ. ಹತ್ತಿರದಲ್ಲಿ ವಾಸ್ತವ್ಯವಿದ್ದ ತಮಿಳು ಮೂಲದ ಕೂಲಿ ಕಾರ್ಮಿಕರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳ ಜತೆ ಈತ ಪರಿಚಯ ಮಾಡಿಕೊಂಡು ಆಕೆಯನ್ನು ಪುಸಲಾಯಿಸಿ ಮನೆ ಹತ್ತಿರದ ಗುಡ್ಡೆಯಲ್ಲಿ ಅತ್ಯಾಚಾರವೆಸಗಿದ್ದ ಎನ್ನಲಾಗಿದೆ. ಈ ಪ್ರಕರಣ ಬುಧವಾರ ಬೆಳಕಿಗೆ ಬಂದಿದ್ದು ಹುಡುಗಿ ಹೆತ್ತವರ ದೂರಿನಂತೆ ಆರೋಪಿಯನ್ನು ಪೊಲೀಸರು ಬಂಧಿಸಿ ಫೊಕ್ಸೊ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಆರೋಪಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
Follow us on Social media