ಢಾಕಾ : ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಪ್ರಾಬಲ್ಯ ಸಾಧಿಸಿದ ಆತಿಥೇಯ ಬಾಂಗ್ಲಾದೇಶ ತಂಡ ಮೊದಲನೇ ಟಿ20 ಪಂದ್ಯದಲ್ಲಿ ಪ್ರವಾಸಿ ಜಿಂಬಾಬ್ವೆ ವಿರುದ್ಧದ 48 ರನ್‌ಗಳ ಭರ್ಜರಿ ಜಯ ಸಾಧಿಸಿತು. ಆ ಮೂಲಕ 3 ಪಂದ್ಯಗಳ ಚುಟುಕು ಸರಣಿಯಲ್ಲಿ ಬಾಂಗ್ಲಾದೇಶ 1-0 ಮುನ್ನಡೆ ಗಳಿಸಿದೆ.
ಇಲ್ಲಿನ ಶೇರ್ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡ, ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದ ಲಿಟನ್ ದಾಸ್ (59) ಮತ್ತು ಸೌಮ್ಯ ಸರ್ಕಾರ್ (62) ಅವರ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ತನ್ನ ಪಾಲಿನ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 200 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು.
ಬಳಿಕ ಗುರಿ ಬೆನ್ನತ್ತಿದ ಜಿಂಬಾಬ್ವೆ ತಂಡ 19 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲ್‌ಔಟ್ ಆಗುವ ಮೂಲಕ 48 ರನ್‌ಗಳ ಅಂತರದಲ್ಲಿ ಬಾಂಗ್ಲಾದೇಶ ವಿರುದ್ಧ ತನ್ನ ಅತ್ಯಂತ ಹೀನಾಯ ಸೋಲಿನ ಆಘಾತಕ್ಕೊಳಗಾಯಿತು.