ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2020 ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 57 ರನ್ ಗಳ ಅಂತರದಿಂದ ಮಣಿಸಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್ ಗಳ ಬೃಹತ್ ಮೊತ್ತ ಪೇರಿಸಿತು.
ಮುಂಬೈ ಇಂಡಿಯನ್ಸ್ ಪರ ಇಶಾನ್ ಕಿಶಾನ್ 55, ಸೂರ್ಯ ಕುಮಾರ್ ಯಾದವ್ 51, ಕ್ವಿಂಟನ್ ಡಿ ಕಾಕ್ 40 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಆರ್ ಅಶ್ವಿನ್ 3, ಮಾರ್ಕಸ್ ಸ್ಟೊಯಿನಿಸ್ ಹಾಗೂ ಅನ್ರಿಕ್ ನಾರ್ಟ್ಜೆ ತಲಾ ಒಂದು ವಿಕೆಟ್ ಪಡೆದುಕೊಂಡರು.
ಮುಂಬೈ ಇಂಡಿಯನ್ಸ್ ನೀಡಿದ 200 ರನ್ ಗಳ ಗುರಿ ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಲಷ್ಟೇ ಶಕ್ತವಾಯಿತು.
ಡೆಲ್ಲಿ ಕ್ಯಾಪಿಟಲ್ಸ್ ಪರ ಮಾರ್ಕಸ್ ಸ್ಟೂಯಿನಿಸ್ 65, ಅಕ್ಷರ್ ಪಟೇಲ್ 42, ಕಗಿಸೋ ರಬಾಡ 15 ರನ್ ಕಲೆ ಹಾಕಿದರು.
ಮುಂಬೈ ಇಂಡಿಯನ್ಸ್ ಪರ ಜುಸ್ಪೀತ್ ಬೂಮ್ರಾ 4, ಟ್ರಿಂಟ್ ಬೌಲ್ಟ್ 2, ಕೃನಾಲ್ ಪಾಂಡ್ಯ 1 ವಿಕೆಟ್ ಪಡೆದುಕೊಂಡರು.
4 ಓವರ್ ಗಳಲ್ಲಿ 4 ವಿಕೆಟ್ ಪಡೆದು ಮುಂಬೈ ಇಂಡಿಯನ್ಸ್ ತಂಡ ಫೈನಲ್ ಗೆ ಲಗ್ಗೆ ಇಡಲು ಪ್ರಮುಖ ಕಾರಣರಾದ ಜಸ್ಪ್ರೀತ್ ಬೂಮ್ರಾ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
Follow us on Social media