ಉಪ್ಪಿನಂಗಡಿ: 34ನೇ ನೆಕ್ಕಿಲಾಡಿ ಗ್ರಾಮದ ಕೊಳಕ್ಕೆ ಎಂಬಲ್ಲಿ ಸೋಮವಾರ ಸಾಯಂಕಾಲ ಮೊಬೈಲ್ ಚಾರ್ಚ್‌ಗೆ ಇಡುವ ಸಂದರ್ಭ ವಿದ್ಯುತ್ ಪ್ರವಹಿಸಿ ಕೊಳಕ್ಕೆ ನಿವಾಸಿ ಲಕ್ಷ್ಮಣ ಗೌಡ(50) ಎಂಬುವರು ಮೃತಪಟ್ಟಿದ್ದಾರೆ.
ಮನೆಯಲ್ಲಿ ಮೊಬೈಲ್ ಚಾರ್ಜ್‌ಗೆ ಮಾಡಲು ಇಟ್ಟಾಗ ವಿದ್ಯುತ್ ಆಘಾತಕ್ಕೊಳಗಾಗಿದ್ದು, ಅಲ್ಲಿಂದ ಎಸೆಯಲ್ಪಟ್ಟರು. ಕೂಡಲೇ ಮನೆಯವರು ಅವರನ್ನು ಉಪ್ಪಿನಂಗಡಿ ಆಸ್ಪತ್ರೆಗೆ ಕರೆ ತಂದರೂ, ಅದಾಗಲೇ ಮೃತಪಟ್ಟಿದ್ದರು. ಮೃತರ ಪತ್ನಿ ರತ್ನಾವತಿ ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಕೂಲಿ ಕಾರ್ಮಿಕರಾಗಿದ್ದು, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.