ಗ್ವಾಲಿಯರ್: ಯಾವ ಪಕ್ಷ ಸೇರಬೇಕು ಎಂಬುದನ್ನು ನಿರ್ಧರಿಸಲು ಪ್ರತಿಯೊಬ್ಬರು ಸ್ವತಂತ್ರ್ಯರಾಗಿರುತ್ತಾರೆ, ಹಾಗೇಯೇ ಯಾವುದು ತಪ್ಪು ಮತ್ತು ಯಾವುದು ಸರಿ ಎಂಬುದನ್ನು ನಿರ್ಧರಿಸುತ್ತಾರೆ ಎಂದು ಮಾಜಿ ಡಿಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ.
ಬಿಜೆಪಿ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಅವರನ್ನು ದ್ರೋಹಿ ಎಂದು ಟೀಕಿಸಿದ ಕಾಂಗ್ರೆಸ್ ನಾಯಕರ ಹೇಳಿಕೆಗೆ ಸಚಿನ್ ಪೈಲಟ್ ಪ್ರತಿಕ್ರಿಯೆ ನೀಡಿದ್ದು, ಯಾವ ಪಕ್ಷವನ್ನು ಸೇರಬೇಕೆಂದು ನಿರ್ಧರಿಸಲು ಎಲ್ಲರು ಸ್ವತಂತ್ರರು, ಅಂತಿಮವಾಗಿ ಜನರೇ ಒಳ್ಳೆಯದು ಮತ್ತು ಕೆಟ್ಟದ್ದನ್ನು ನಿರ್ಧರಿಸುತ್ತಾರೆ ಎಂದಿದ್ದಾರೆ.
ಈ ವರ್ಷದ ಆರಂಭದಲ್ಲಿ ಜ್ಯೋತಿರಾಧಿತ್ಯ ಸಿಂದಿಯಾ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ತಮ್ಮ ನಾಯಕರ ಪ್ರತಿ ಚಲನವಲನಗಳನ್ನು ಜನರು ಗಮನಿಸುತ್ತಿರುತ್ತಾರೆ, ಕೇವಲ ಮಧ್ಯಪ್ರದೇಶದಲ್ಲಿ ಮಾತ್ರವಲ್ಲ, ಬಿಹಾರದಲ್ಲೂ ಕೂಡ ತಮ್ಮ ಪಕ್ಷದ ಅಭ್ಯರ್ಥಿಗಳು ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ನವೆಂಬರ್ 3 ರಂದು ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ.
Follow us on Social media