ಬೆಂಗಳೂರು: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಹಾರೈಸಿ, ರಕ್ತದಾನದ ಮಹತ್ವವನ್ನು ಸಾರಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ವಿಶ್ವ ರಕ್ತದಾನಿಗಳ ದಿನದ ಶುಭಾಶಯಗಳು. ಅತ್ಯಗತ್ಯ ಸಂದರ್ಭಗಳಲ್ಲಿ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವಕ್ಕೆ ಆಸರೆಯಾಗೋಣ ಎಂದು ಹೇಳಿದ್ದಾರೆ.
ಇನ್ನೊಬ್ಬರ ಜೀವ ಉಳಿಸುವ ರಕ್ತದಾನವೇ ಶ್ರೇಷ್ಠ ದಾನ. ರಕ್ತದಾನದ ಕುರಿತು ಅರಿವು ಮೂಡಿಸುವ, ರಕ್ತದಾನಿಗಳನ್ನು ಪ್ರೋತ್ಸಾಹಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸುರಕ್ಷಿತ ರಕ್ತ ಎಲ್ಲರಿಗೂ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುವ ಕುರಿತು ಪಣ ತೊಡೋಣ ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.
Follow us on Social media