ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 99 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ.
ಇಂದು ಬೆಳಗ್ಗೆ 84 ಹಾಗೂ ಸಂಜೆ 15 ಹೊಸ ಪ್ರಕರಣಗಳು ವರದಿಯಾಗಿದ್ದು, ಇದು ಇಲ್ಲಿಯವರೆಗೆ ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ. ಮಂಡ್ಯದಲ್ಲಿ 17 ಹಾಗೂ ಬೆಂಗಳೂರು ನಗರದಲ್ಲಿ 24 ಪ್ರಕರಣಗಳು ವರದಿಯಾಗಿವೆ.
ಹಾಸನದಲ್ಲಿ 4, ರಾಯಚೂರಿನಲ್ಲಿ 6, ಬೆಂಗಳೂರು ನಗರದಲ್ಲಿ 24, ಕೊಪ್ಪಳದಲ್ಲಿ 3, ವಿಜಯಪುರದಲ್ಲಿ 5, ಗದಗದಲ್ಲಿ 5, ಮೈಸೂರಿನಲ್ಲಿ 1, ಬಳ್ಳಾರಿಯಲ್ಲಿ 1, ದಾವಣಗೆರೆಯಲ್ಲಿ 1, ದಕ್ಷಿಣ ಕನ್ನಡ 2, ಯಾದಗಿರಿಯಲ್ಲಿ 5, ಬೀದರ್ ನಲ್ಲಿ 1, ಕಲಬುರಗಿಯಲ್ಲಿ 10, ಉತ್ತರ ಕನ್ನಡದಲ್ಲಿ 9, ಮಂಡ್ಯದಲ್ಲಿ 17, ಕೊಡಗಿನಲ್ಲಿ 1, ಬೆಳಗಾವಿಯಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಉತ್ತರ ಕನ್ನಡದ 2 ವರ್ಷದ ಮಗು ಹಾಗೂ ಮಂಡ್ಯದ 3 ವರ್ಷದ ಹೆಣ್ಣು ಮಗುವಲ್ಲಿ ಕೂಡ ಸೋಂಕು ದೃಢಪಟ್ಟಿದೆ. ಇದರಲ್ಲಿ ಮುಂಬೈನಿಂದ ಆಗಮಿಸಿದ ಬಹುತೇಕ ವ್ಯಕ್ತಿಗಳಲ್ಲಿ ಸೋಂಕು ಪತ್ತೆಯಾಗಿದೆ.
Follow us on Social media