ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶುಕ್ರವಾರ ಒಂದೇ ದಿನ ಬರೋಬ್ಬರಿ 353 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 24207ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 9,591 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,03,844ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 129 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 52581 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 18,29,276ಕ್ಕೆ ಏರಿಕೆಯಾಗಿದೆ. ಇನ್ನು 5,14,238 ಸಕ್ರೀಯ ಪ್ರಕರಣಗಳಿವೆ.
Follow us on Social media