ಬೆಂಗಳೂರು : ರಾಜ್ಯದಲ್ಲಿ ಈವರೆಗೆ ಯಾವುದೇ ಕೋವಿಡ್-19 ಪ್ರಕರಣ ದಾಖಲಾಗಿಲ್ಲ. ಬೆಂಗಳೂರು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು, ಕಾರವಾರ ಬಂದರಿನಲ್ಲಿ ಅನ್ಯ ದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿದೆ. ಈವರೆಗೆ 72,542 ಪ್ರಯಾಣಿಕರನ್ನು ತಪಾಸಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಬೆಂಗಳೂರಿನ ವಿವಿಧ ಮಾಲ್ ಹಾಗೂ ಕ್ಲಬ್ ಗಳಲ್ಲಿ ಮುಂಜಾಗ್ರತಾ ಕ್ರಮಗಳು ಹಾಗೂ ಅರಿವು ಮೂಡಿಸುವ ಸಲುವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಘಗಳ ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಿ, ನಿರ್ದೇಶನ ನೀಡಲಾಗಿದೆ. ಹಳ್ಳಿಗಳಲ್ಲಿ ಈ ಸೋಂಕಿನ ಬಗ್ಗೆ ಅರಿವು ಮೂಡಿಸಲು ಸೂಚನಾ ಫಲಕ ಅಳವಡಿಸುವಂತೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸೂಚಿಸಲಾಗಿದೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.