ಬೆಂಗಳೂರು : ರಾಜ್ಯದಲ್ಲಿ ಮಾರಕ ಕರೋನಾ ಸೋಂಕಿಗೆ ಬೆಂಗಳೂರಿನಲ್ಲಿ ಮೊದಲ ಬಲಿಯಾಗಿದೆ.ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಯಲ್ಲಿ ಸೋಂಕಿತ ವ್ಯಕ್ತಿಯೊಬ್ಬರು ಇಂದು ಮೃತಪಟ್ಟಿದ್ದಾರೆ.ಬೆಂಗಳೂರಿನ ಮೃತಪಟ್ಟ ಮೊದಲ ಪ್ರಕರಣ ಇದಾಗಿದೆ.ಇದರೊಂದಿಗೆ ರಾಜ್ಯದಲ್ಲಿ ಮಾರಕ ಸೋಂಕಿಗೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ನೆನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ 65 ವರ್ಷದ ಪುರುಷರೊಬ್ಬರು ಇಂದು ಮೃತಪಟ್ಟಿದ್ದಾರೆ. ಇವರು ಹೃದಯ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಇವರನ್ನು ಪ್ರತ್ಯೇಕ ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ, ಪರೀಕ್ಷೆ ಮಾಡಲಾಗಿ,ವರದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
Follow us on Social media