ಬೆಂಗಳೂರು : ಕರೋನ ಸಂಕಷ್ಟ ನಿವಾರಣೆಗಾಗಿ ಮೇ. 3 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿರುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಸಂಕಷ್ಟದಲ್ಲಿರುವ ರೈತ ವರ್ಗ ಮತ್ತು ದಿನಗೂಲಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡದಿರುದು ನಿರಾಸೆ ತಂದಿದೆ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಕೊರೊನಾ ವೈರಸ್ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ. 3 ರವರೆಗೆ ಲಾಕ್ ಡೌನ್ ಅವಧಿ ವಿಸ್ತರಣೆ ಮಾಡಿರುವುದಕ್ಕೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ 2 ನೇ ಬಾರಿಗೆ ಮೇ. 3 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿರುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ರೈತ ವರ್ಗ ಮತ್ತು ದಿನಗೂಲಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಿತ್ತು ಎಂದು ಅವರು ಹೇಳಿದ್ದಾರೆ.