ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯಂತೆ ಎಲ್ಲರೂ ಲಾಕ್ ಡೌನ್ ನಿಯಮ ಪಾಲಿಸಲೇಬೇಕು. ನಿಯಮ ಮುರಿದರೆ ಮತ್ತಷ್ಟು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಟ್ ಸ್ಪಾಟ್ ಗಳಲ್ಲಿ ಮತ್ತಷ್ಟು ಕಠಿಣವಾದ ನೀತಿ ಜಾರಿಗೆ ಬರಲಿದೆ. ಸಾಮಾಜಿಕ ಅಂತರವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ನೆರವಾಗಿ ಎಂದು ಮನವಿ ಮಾಡಿದರು.
ಕೃಷಿಕರಿಗೆ ಯಾವುದೇ ತೊಂದರೆ ಆಗದಂತೆ ಬಿತ್ತನೆ ಬೀಜ, ರಸಗೊಬ್ಬರ ಸರಬರಾಜು ಮಾಡಿದ್ದೇವೆ.