ಕಲಬುರಗಿ : ಕಲಬುರಗಿಯ ವೃದ್ಧರೊಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿ ಇಂದಿಗೆ ಒಂದು ತಿಂಗಳು ಗತಿಸಿದ್ದು, ರಾಜ್ಯದಲ್ಲೇ ಇದೇ ಮೊದಲ ಬಲಿಯಾಗಿತ್ತು.
ಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ಎರಡು ಬಲಿ ಪಡೆದಿದ್ದು, 9 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಈ ಹಿನ್ನೆಲೆಯಲ್ಲಿ ನಗರದಾದ್ಯಂತ ದಿನದಿಂದ ದಿನಕ್ಕೆ ಕಟ್ಟು ನಿಟ್ಟಿನ ಕ್ರಮವನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ.