ಬೆಂಗಳೂರು: ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಈ ಹಬ್ಬವು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೋನಾ ಹಿನ್ನಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ ಹಬ್ಬವನ್ನು ಆಚರಿಸಿ, ಮುನ್ನೆಚ್ಚರಿಕೆ ತೆಗೆದುಕೊಂಡು ಸುರಕ್ಷತಾ ನಿಯಮಗಳನ್ನು ಪಾಲಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.
ಆರೋಗ್ಯ ಸಚಿವ ಬಿ.ಶ್ರೀರಾಮುಲು ಶುಭಾಶಯ ಕೋರಿದ್ದು, ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ವೃತದ ಹಾರ್ದಿಕ ಶುಭಾಶಯಗಳು. ವರಮಹಾಲಕ್ಷ್ಮಿಯು ಆರೋಗ್ಯ, ಐಶ್ವರ್ಯ, ಸುಖ- ಶಾಂತಿ ಸಮೃದ್ಧಿಯನ್ನು ನೀಡಿ ಹರಸಲಿ. ಕೊರೊನ ಹಿನ್ನೆಲೆಯಲ್ಲಿ, ಹಬ್ಬದ ಸಂದರ್ಭದಲ್ಲಿ ಎಚ್ಚರ ವಹಿಸಲು ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಎರಡನೇ ಶ್ರಾವಣ ಶುಕ್ರವಾರದಂದು ಆಚರಿಸುವ ವರಮಹಾಲಕ್ಷ್ಮಿ ವ್ರತ ಎಲ್ಲರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ, ಆಯುಷ್ಯ, ಆರೋಗ್ಯ ಮತ್ತು ಐಶ್ವರ್ಯ ಕರುಣಿಸಲಿ ಎಂದು ಆ ಜಗನ್ಮಾತೆಯನ್ನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
Follow us on Social media