ನವದೆಹಲಿ : ವಲಸೆ ಕಾರ್ಮಿಕರನ್ನು ಊರುಗಳಿಗೆ ಕರೆದೊಯ್ಯಲು ರೈಲ್ವೆ ಇಲಾಖೆ ವ್ಯವಸ್ಥೆ ಮಾಡಿರುವ ವಿಶೇಷ ರೈಲುಗಳ ಟಿಕೆಟ್ ದರದಲ್ಲಿ ಶೇಕಡಾ 85ರಷ್ಟು ರಿಯಾಯಿತಿ ನೀಡಲಾಗಿದ್ದು ಉಳಿದ ಶೇಕಡಾ 15ರಷ್ಟನ್ನು ಆಯಾ ರಾಜ್ಯ ಸರ್ಕಾರಗಳು ಭರಿಸಲಿವೆ ಎಂದು ಭಾರತೀಯ ಜನತಾ ಪಾರ್ಟಿ ಕಾಂಗ್ರೆಸ್ ಗೆ ತಿರುಗೇಟು ನೀಡಿದೆ.
ವಲಸೆ ಕಾರ್ಮಿಕರ ಬಗ್ಗೆ ಕೇಂದ್ರ ಸರ್ಕಾರ ಕಾಳಜಿ ಹೊಂದಿಲ್ಲ, ಅವರ ಪ್ರಯಾಣ ವೆಚ್ಚವನ್ನು ಉಚಿತ ಮಾಡಿಲ್ಲ ಎಂದು ಆರೋಪಿಸಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕಾರ್ಮಿಕರ ರೈಲು ಪ್ರಯಾಣ ವೆಚ್ಚವನ್ನು ಸಂಪೂರ್ಣವಾಗಿ ಕಾಂಗ್ರೆಸ್ ಭರಿಸಲಿದೆ ಎಂದು ಇಂದು ಬೆಳಗ್ಗೆ ಪ್ರಕಟಿಸಿದ್ದರು.
ಪ್ರಧಾನ ಮಂತ್ರಿ ಕೇರ್ ನಿಧಿಗೆ 151 ಕೋಟಿ ರೂಪಾಯಿ ನೀಡಿದ್ದರೂ ಸಹ ವಲಸೆ ಕಾರ್ಮಿಕರಿಂದ ಪ್ರಯಾಣ ದರ ಕಿತ್ತುಕೊಳ್ಳುತ್ತಿದೆ ಸರ್ಕಾರ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.
ಇದಕ್ಕೆ ಸ್ಪಷ್ಟನೆ ನೀಡಿರುವ ಬಿಜೆಪಿ ವಕ್ತಾರ ಸಂಬಿತ್ ಪತ್ರ,ಆಯಾ ರಾಜ್ಯ ಸರ್ಕಾರಗಳು ಶೇಕಡಾ 15ರಷ್ಟು ಟಿಕೆಟ್ ದರವನ್ನು ಕಾರ್ಮಿಕರಿಗೆ ನೀಡಲಿದೆ. ಮಧ್ಯ ಪ್ರದೇಶ ಸರ್ಕಾರ ಈ ರೀತಿ ಮಾಡುತ್ತಿದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿಯೂ ಈ ಕ್ರಮ ಪಾಲಿಸುವಂತೆ ಹೇಳಿ ಎಂದು ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.
ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಂಬಿತ್ ಪತ್ರ, ಗೃಹ ಸಚಿವಾಲಯದ ಮಾರ್ಗಸೂಚಿಗಳನ್ನು ಓದಿ.ಅದರಲ್ಲಿ ಯಾವ ರೈಲು ನಿಲ್ದಾಣಗಳಲ್ಲಿ ಸಹ ಕಾರ್ಮಿಕರಿಂದ ಪ್ರಯಾಣ ದರ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟವಾಗಿ ನಮೂದಿಸಲಾಗಿದೆ. ವಲಸೆ ಕಾರ್ಮಿಕರಿಗಾಗಿಯೇ ಶ್ರಮಿಕ್ ರೈಲು ಸಂಚರಿಸುತ್ತಿದ್ದು ರೈಲ್ವೆ ಇಲಾಖೆ ಸುಮಾರು 1,200 ಟಿಕೆಟ್ ಗಳನ್ನು ಸಂಬಂಧಪಟ್ಟ ರಾಜ್ಯ ಸರ್ಕಾರಗಳಿಗೆ ಈಗಾಗಲೇ ನೀಡಲಾಗಿದೆ ಎಂದಿದ್ದಾರೆ.
Source : PTI
Follow us on Social media