ಬಂಟ್ವಾಳ: ಕೆಂಪು ಕಲ್ಲು ಸಾಗಾಟದ ಲಾರಿಯಡಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನಾರಾಯಣ ನಾಯ್ಕ (38) ಎಂದು ಗುರುತಿಸಲಾಗಿದೆ.
ವಿಟ್ಲ ಪೇಟೆಯಿಂದ ಕಾಸರಗೋಡು ಕಡೆಗೆ ತೆರಳುವ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ.
ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಕೆಂಪು ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿ ನಾರಾಯಣ ನಾಯ್ಕ ಅವರಿಗೆ ಢಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ತೀವ್ರ ಗಾಯಗೊಂಡ ನಾರಾಯಣ ನಾಯ್ಕ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media