ಬೆಂಗಳೂರು : ವಿಶಾಖಪಟ್ಟಣದಲ್ಲಿ ನಡೆದ ವಿಷಾನಿಲ ಸೋರಿಕೆಯ ದುರಂತ ಘಟನೆ ದುರದೃಷ್ಟಕರ. ಇಂತಹ ಘಟನೆ ಎಲ್ಲಿಯೂ ಮರುಕಳಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ, ಎರಡು ತಿಂಗಳ ನಂತರ ತಮ್ಮ ಕೈಗಾರಿಕೆಗಳನ್ನು ಆರಂಭಿಸುತ್ತಿರುವ ವ್ಯವಸ್ಥಾಪಕರು, ಈ ಅನಿಲ ದುರಂತವನ್ನು ಎಚ್ಚರಿಕೆಯ ಪಾಠವಾಗಿ ತೆಗೆದುಕೊಳ್ಳಬೇಕು. ಹಾಗಾಗಿ, ಎಲ್ಲಾ ಸುರಕ್ಷಿತ ಮುಂಜಾಗ್ರತಾ ಕ್ರಮಗಳನ್ನು ಖಾತರಿಪಡಿಸಿಕೊಂಡ ನಂತರವೇ ಉತ್ಪಾದನೆ ಆರಂಭಿಸಬೇಕೆಂದು ಕೋರುತ್ತೇನೆ ಎಂದು ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
Follow us on Social media