ಬೆಂಗಳೂರು: ಮಾಜಿ ಸಚಿವ, ಹಾಲಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮೂಲಕ ಸ್ವತಃ ಮಾಹಿತಿ ನೀಡಿರುವ ಅವರು , ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
Follow us on Social media