Breaking News

ಶಿವಮೊಗ್ಗ: ಅಡುಗೆ ಮಾಡುವಾಗ ಹಾವು ಕಚ್ಚಿ ಗೃಹಿಣಿ ಸಾವು

ಶಿವಮೊಗ್ಗ : ಅಡುಗೆ ಮಾಡುವಾಗ ಹಾವು ಕಚ್ಚಿ ಗೃಹಿಣಿಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಮೇಲಿಗೆಬೆಸಿಗೆ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮೇಲಿನ ಬೆಸಿಗೆ ಗ್ರಾಮದಲ್ಲಿ ಘಟನೆ ನಡೆದಿದ್ದು , ನಾಗರಾಜ್ ಅವರ ಪತ್ನಿ ಸೌಮ್ಯ(24) ಮೃತಪಟ್ಟವರು. ಬುಧವಾರ ಮಧ್ಯಾಹ್ನ ಅಡುಗೆ ಮನೆಯಲ್ಲಿ ಅಡುಗೆ ಮಾಡುವಾಗ ಕಾಅಲ್ಲಿಯೇ ಇದ್ದ ವಿಷಕಾರಿ ಹಾವು ಸೌಮ್ಯ ಕಾಲಿಗೆ ಕಚ್ಚಿದೆ. ಆದರೆ ಹಾವು ಕಚ್ಚಿರುವುದು ಸೌಮ್ಯಗೆ ತಿಳಿದಿಲ್ಲ . ಸ್ವಲ್ಪ ಸಮಯದ ನಂತರ ಬಾಧೆ ಜಾಸ್ತಿಯಾಗಿದ್ದು, ಮನೆಯವರಿಗೆ ವಿಷಯ ತಿಳಿಸಿದ್ದಾರೆ.

ಹಾವು ಕಚ್ಚಿರಬಹುದೆಂದು ಮನೆಯವರು ಹೊಸನಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಸೌಮ್ಯ ಸಾವನ್ನಪ್ಪಿದ್ದಾರೆ. ಪತಿ, 3 ವರ್ಷದ ಪುತ್ರನನ್ನ ಬಿಟ್ಟು ಅಗಲಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಸೌಮ್ಯ, ನಾಗರಾಜ್ ಪ್ರೀತಿಸಿ ವಿವಾಹವಾಗಿದ್ದರು. ಮನೆ ದುರಸ್ತಿ ಕಾರ್ಯ ಕೈಗೊಂಡ ಹಿನ್ನೆಲೆಯಲ್ಲಿ ಪಕ್ಕದಲ್ಲಿ ತಾತ್ಕಾಲಿಕವಾಗಿ ವಾಸವಿದ್ದರು. ಈ ಸಂದರ್ಭ ಅಡುಗೆ ಮಾಡುವಾಗ ಹಾವು ಕಚ್ಚಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×