ಬೆಂಗಳೂರು: ತಾಂತ್ರಿಕ ಕಾರಣಗಳಿಂದಾಗಿ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷಾ ಫಲಿತಾಂಶ ಶುಕ್ರವಾರ ಇದೇ 21 ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆಇಎ ಸ್ಪಷ್ಟಪಡಿಸಿದೆ.
ಶುಕ್ರವಾರ 12.30ಕ್ಕೆ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇಂದು ಅಧಿಕೃತ ಮಾಹಿತಿ ನೀಡಿದೆ.
ಶುಕ್ರವಾರ ಬೆಳಿಗ್ಗೆ 11ಕ್ಕೆ ಪತ್ರಿಕಾಗೋಷ್ಠಿ ನಡೆಯಲಿದ್ದು . ತದನಂತರ ಫಲಿತಾಂಶ ಹೊರ ಬೀಳಲಿದೆ ಎನ್ನಲಾಗಿದೆ.ಫಲಿತಾಂಶಕ್ಕಾಗಿ http://karresults.nic.in ವೆಬ್ ಲಿಂಕಿಗೆ ಭೇಟಿ ನೀಡಿ.