ಬೆಂಗಳೂರು: ಶನಿವಾರ ಬಿಎಂಸಿಆರ್ ಐ ಮತ್ತು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಪ್ರತಿಭಟಿಸಿದ ಸ್ಟಾಫ್ ನರ್ಸ್ ಗಳ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳೊಂದಿಗೆ ಕೂಡಲೇ ಚರ್ಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.
ಕೋವಿಡ್ ಕಾರ್ಯದಲ್ಲಿ ನಿರತರಾಗಿರುವ ನರ್ಸ್ ಗಳು ವಿವಿಧ ಸೌಲಭ್ಯಗಳನ್ನು ನೀಡಬೇಕೆಂದು ಆಗ್ರಹಿಸಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದರು.
ಇದಕ್ಕೆ ಕೂಡಲೇ ಸ್ಪಂದಿಸಿದ ಸಚಿವ ಡಾ.ಕೆ.ಸುಧಾಕರ್, “ಸಿಬ್ಬಂದಿಯ ಬೇಡಿಕೆಗಳ ಬಗ್ಗೆ ಕೂಡಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಚರ್ಚೆ ಮಾಡಲಾಗುವುದು. ಆದಷ್ಟು ಬೇಗನೆ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು”, ಎಂದು ತಿಳಿಸಿದ್ದಾರೆ. “ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವುದರಿಂದ ಸಿಬ್ಬಂದಿ ಕೆಲಸಕ್ಕೆ ಮರಳಿ ಕಾರ್ಯಪ್ರವೃತ್ತರಾಗಬೇಕು.
ಸಿಬ್ಬಂದಿಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಈ ಸಮಯದಲ್ಲಿ ಎಲ್ಲವನ್ನೂ ಗಮನದಲ್ಲಿರಿಸಿಕೊಂಡು ಸರ್ಕಾರವು ಸಿಬ್ಬಂದಿಯ ಬೇಡಿಕೆಗಳನ್ನು ಈಡೇರಿಸಲಿದೆ”, ಎಂದು ಸಚಿವರು ಆಶ್ವಾಸನೆ ನೀಡಿದರು.
ಈ ಕುರಿತು ಸಚಿವರು ಟ್ವೀಟ್ ಮಾಡಿದ್ದಾರೆ.