ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ. ಕಳೆದ ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಸುಳ್ಲು ಮಾಹಿತಿ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿಮಾಡಿದೆ.
ಜೆಡಿಎಸ್ ಸಂಸದರಾದ ಪ್ರಜ್ವಲ್ ರೇವಣ್ನ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಆದಾಯ ತೆರಿಗೆ ಇಲಾಖೆ ಹಾಗೂ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ಎ. ಮಂಜು ಸಲ್ಲಿಕೆ ಮಾಡಿದ್ದ ಅರ್ಜಿ ಸಂಬಂಧ ಸರ್ವೋಚ್ಚ ನ್ಯಾಯಾಲಯ ಈ ನೋಟೀಸ್ ನೀಡಿದೆ.
ಈ ಹಿಂದೆ ಲೋಕಸಭೆ ಪರಾಜಿತ ಅಭ್ಯರ್ಥಿ ಎ. ಮಂಜು ಪ್ರಜ್ವಲ್ ರೇವಣ್ನ ವಿರುದ್ಧ ಕರ್ನಾಟಕ ಹೈಕೋರ್ಟ್ ನ ಮೊರೆ ಹೋಗಿದ್ದರು ಆದರೆ ಹೈಕೋರ್ಟ್ ನಲ್ಲಿ ಮಂಜು ಅವರ ಅರ್ಜಿ ವಜಾ ಆಗಿತ್ತು. ಇದರಿಂದಾಗಿ ಮಂಜು ಅವರು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.ಈಗ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆಗೆ ಸಮ್ಮತಿಸಿ ಮುಖ್ಯನ್ಯಾಯಮೂರ್ತಿ ಎಸ್.ಎ. ಬೋಬ್ಡೆ ನೇತೃತ್ವದ ಪೀಠ ಸಂಸದರಿಗೆ ನೋಟೀಸ್ ನೀಡಿದೆ.
Follow us on Social media