ಹುಬ್ಬಳ್ಳಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆ ಬಳಿಕ ಆರೋಪಿಗಳು ಕಾರಿನಲ್ಲಿ ಪರಾರಿಯಾಗುವ ಯತ್ನದಲ್ಲಿದ್ದರು ಎನ್ನಲಾಗಿದೆ.
- ಕಲಘಟಗಿ ತಾಲೂಕ ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ, ಮಂಜುನಾಥ ಮರೇವಾಡ ಬಂಧಿತರು. ಇಬ್ಬರೂ ಕಾರಿನಲ್ಲಿ ಬೆಳಗಾವಿ ಕಡೆಗೆ ತೆರಳುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದುಕೊಂಡ ಇನ್ಸ್‌ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ತನಿಖಾ ತಂಡವು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದ ಸುಮಾರು ನಾಲ್ಕು ತಾಸಿನೊಳಗಾಗಿ ಆರೋಪಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಇದೀಗ ಇಬ್ಬರನ್ನೂ ಹುಬ್ಬಳ್ಳಿಗೆ ಕರೆ ತರಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.ಗೋಕುಲ್ ರಸ್ತೆಯಲ್ಲಿರುವ ಗುರೂಜಿಯವರ ಅಪಾರ್ಟ್ಮೆಂಟ್ ನಲ್ಲರುವ ಆರೋಪಿ ಮಹಾಂತೇಶ ಶಿರೂರ ಎಂಬಾತನ ಮನೆಯಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಆತನ ಪತ್ನಿಯನ್ನು ಈಗಾಗಲೇ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರದಿಂದಾಗಿ ಕೊಲೆ ನಡೆದಿದೆ ಎನ್ನಲಾಗುತ್ತಿದೆ.