ಬೆಂಗಳೂರು : ‘ಹೊರರಾಜ್ಯ, ಹಾಗೂ ದೇಶಗಳಿಂದ ಕರ್ನಾಟಕಕ್ಕೆ ಬರುವವರು ಕ್ವಾರಂಟೈನ್‌ಗೆ ಒಳಪಡುವುದು ಕಡ್ಡಾಯ. ಅಲ್ಲದೆ, ಅಂಥವರು ಆನ್‌ಲೈನ್ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಭಾನುವಾರ ಸಭೆ ನಡೆಸಿದ ಮುಖ್ಯಮಂತ್ರಿ, ಬೇರೆ ಬೇರೆ ದೇಶ ಹಾಗು ರಾಜ್ಯದಿಂದ ಕನ್ನಡಿಗರು ವಾಪಸಾಗುತ್ತಿದ್ದು, ಅವರನ್ನು ಯಾವ ರೀತಿ ಕ್ವಾರಂಟೈನ್ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸಿದರು. ‘ಹೊರ ರಾಜ್ಯದಿಂದ ಬರುವ ಕನ್ನಡಿಗರು ನಿರ್ದಿಷ್ಟ ವ್ಯವಸ್ಥೆಯಡಿ ಬರುವಂತೆ ಮಾಡಬೇಕು.
ಹೊರರಾಜ್ಯ, ದೇಶಗಳಿಂದ ತಾಯ್ನಾಡಿಗೆ ಬರುವವರು ಕ್ವಾರಂಟೈನ್‌ಗೆ ಒಳಪಡುವುದು ಕಡ್ಡಾಯ. ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ರಾಜ್ಯದಿಂದ ಅನಿವಾರ್ಯವಾಗಿ ಹೊರ ಹೋಗಿ ಸಿಕ್ಕಿಹಾಕಿ ,ಎಲ್ಲಿಗೆ ಬರುತ್ತೇವೆ ಮತ್ತು ಯಾವಾಗ ಬರುತ್ತೇವೆ ಎಂಬುವುದನ್ನು ಆನ್‌ಲೈನ್‌ನಲ್ಲಿ ನೋಂದಣಿ ಮಾಡಬೇಕು’ ಎಂದರು. ‘ರಾಜ್ಯಕ್ಕೆ ಬಂದ ತಕ್ಷಣ ಯಾರೂ
ಅವರವರ ಊರಿಗೆ ಹೋಗುವಂತಿಲ್ಲ. ಬಂದವರೆಲ್ಲರೂ 14 ದಿನ ಕ್ವಾರಂಟೈನ್ ಆಗಲೇಬೇಕು ಎಂದು ತಿಳಿಸಿದ್ದಾರೆ
ಇನ್ನೂ ಬೇರೆ ಸ್ಥಳಗಳಲ್ಲಿ ವ್ಯಕ್ತಿ ಮರಣ ಹೊಂದಿದರೇ ಅದೇ ಸ್ಥಳದಲ್ಲಿ ಅಂತ್ಯ ಸಂಸ್ಕಾರ ನಡೆಸಬೇಕು, ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಬಿಡುವುದಿಲ್ಲ ಎಂದು ಸಿಎಂ ಹೇಳಿದ್ದಾರೆ.
Follow us on Social media