ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲದ ಪ್ರತಿ ಗ್ರಾಮಕ್ಕೂ ಕುಡಿಯುವ ನೀರು ಪೂರೈಸುವ ಯೋಜನೆಯನ್ನು 1, 800 ರೂ ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಜಿಲ್ಲಾಧಿಕಾರಿ ಅರ್ಚನಾ, ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯರಾಮ್, ಗ್ರಾಮೀಣ ನೀರು ಸರಬರಾಜು ಇಲಾಖೆಯ ಮುಖ್ಯ ಎಂಜಿನಿಯರ್ ಹಾಗೂ ಉನ್ನತ ಅಧಿಕಾರಿಗಳ ಜತೆ ಮಹತ್ವದ ಚರ್ಚೆ ನಡೆಸಿ, ಜಿಲ್ಲೆಯಲ್ಲಿ ನದಿ ಮೂಲಗಳ ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಬಗ್ಗೆ ಮಾಹಿತಿ ಪಡೆದುಕೊಂಡು ಎಲ್ಲ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ ಸೋಮವಾರದೊಳಗೆ ಸಲ್ಲಿಸುವಂತೆ ಸೂಚಿಸಿದರು.
ಜಿಲ್ಲೆಗೆ ನದಿ ಮೂಲಗಳಿಂದ ಕುಡಿಯುವ ನೀರಿನ ಪೂರೈಕೆಗಾಗಿ ಹಮ್ಮಿಕೊಂಡಿರುವ ಅಭಿವೃದ್ಧಿ ಯೋಜನೆಗಳ ಕುರಿತು ಬೆಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆ ಎಷ್ಟು ಗ್ರಾಮಗಳಿಗೆ ಈಗಾಗಲೇ ಪೈಪ್ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ. ಎಷ್ಟು ಗ್ರಾಮಗಳಿಗೆ ಇಲ್ಲ ಎಂಬ ಬಗ್ಗೆ ವರದಿ ನೀಡುವಂತೆ ಸೂಚಿಸಿದರು.
Follow us on Social media