ಪುತ್ತೂರು : ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಸೀತಾರಾಮ ಯಾನೆ ಪ್ರವೀಣ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ.
ನಿನ್ನೆ ಬೆಳಗ್ಗೆ ಅಪ್ರಾಪ್ತ ಪ್ರಾಯದ ಇಬ್ಬರು ಬಾಲಕಿಯರು ತಮ್ಮ ಮನೆಯಿಂದ ಪುತ್ತೂರು ನಗರದ ಕಾಲೇಜಿಗೆ ತೆರಳುತ್ತಿದ್ದಾಗ ದಾರಿ ಮಧ್ಯೆ ಅಪರಿಚಿತ ವ್ಯಕ್ತಿಯೋರ್ವ ಈ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಅರೋಪಿಸಲಾಗಿದೆ.
ಬಾಲಕಿಯರು ಆತನಿಂದ ತಪ್ಪಿಸಿಕೊಂಡು ಕಾಲೇಜಿಗೆ ತಲುಪಿ ಘಟನೆಯ ಬಗ್ಗೆ ಕಾಲೇಜಿನ ಉಪನ್ಯಾಸಕಿಗೆ ತಿಳಿಸಿದ್ದಾರೆ.
ಉಪನ್ಯಾಸಕಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಸೀತಾರಾಮ ಯಾನೆ ಪ್ರವೀಣ್ ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ.
ಪ್ರಕರಣದ ತನಿಖೆ ಮುಂದುವರಿದಿದೆ.
Follow us on Social media