ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ ಎಂಟು ತಿಂಗಳ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಕಾವೂರಿನಲ್ಲಿ ನಡೆದಿದೆ.
ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶ ಮೃತ ಮಗು.ಕೂಲಿ ಕಾರ್ಮಿಕರಾಗಿರುವ ಜಾರ್ಖಂಡ್ ರಾಜ್ಯದ ಮೂಲದವರಾದ ಫಿರೋಝ್ ಅನ್ಸಾರಿ ದಂಪತಿ ಕಾವೂರು ಮಸೀದಿಯ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಬುಧವಾರ ಸಂಜೆ ಮಗು ಆಯಿಶಾ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟಿದೆ ಎಂದು ಹೇಳಲಾಗಿದೆ.ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Follow us on Social media