ಕಾರ್ಕಳ: ಬೈಲೂರು ಸಮೀಪದ ಜಾರ್ಕಳ ಬಸ್ರಿಶಾಲೆ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಬಸ್ಸು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಬಸ್ಸು ಚಾಲಕ ತೀವ್ರಸ್ವರೂಪದಲ್ಲಿ ಗಾಯಗೊಂಡ ಘಟನೆ ಜು.24ರಂದು ಸಂಭವಿಸಿದೆ.
ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸು ಒಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸನ್ನು ಹಿಂತಿಕುವ ಭರದಲ್ಲಿ ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ಚಲಾಯಿಸಿ ಬಂದು ಬಸ್ರಿ ಶಾಲಾ ತಿರುವಿನಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆದಿತ್ತು.
ಅಪಘಾತದ ತೀವ್ರತೆಗೆ ಬಸ್ಸು ಚಾಲಕ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು, ಕಾಲಿನ ಮೂಳೆ ಮುರಿತಕ್ಕೊಳಗಾಗಿದೆ.
ಪ್ರಯಾಣಿಕರು ಹಾಗೂ ಟಿಪ್ಪರ್ ಚಾಲಕ ಸಣ್ಣಪುಟ್ಟ ರೀತಿಯಲ್ಲಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಅಗಮಿಸಿದ್ದಾರೆ.
Follow us on Social media