ಉಡುಪಿ : ರಸ್ತೆ ದಾಟುವಾಗ ಟ್ರಕ್ ಢಿಕ್ಕಿ ಹೊಡೆದು ಮಣಿಪಾಲ ಆಸ್ಪತ್ರೆಗೆ ದಾಖಲಾದ ಉದ್ಯಾವರದ ಬೋಳಾರಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್ (37) ಮೆದುಳು ನಿಷ್ಕ್ರಿಯಗೊಂಡಿದ್ದು, ಇದೀಗ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ.
ಪ್ರಶಾಂತ್ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದು, ಬುಧವಾರ ಕೆಲಸ ಮುಗಿಸಿ ಮನೆಗೆ ತೆರಳಲು ಹೆದ್ದಾರಿ ದಾಟುತ್ತಿದ್ದಾಗ ಲಾರಿಯೊಂದು ಡಿಕ್ಕಿ ಹೊಡೆದು ಪ್ರಶಾಂತ್ ತಲೆಗೆ ತೀವ್ರ ಪೆಟ್ಟಾಗಿತ್ತು.ಇನ್ನು ಪ್ರಶಾಂತ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.ಮಣಿಪಾಲ ಆಸ್ಪತ್ರೆಯ ವೈದ್ಯರು ಪ್ರಶಾಂತ್ ಅವರ ಕುಟುಂಬ ಸದಸ್ಯರಿಗೆ ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸಿದ್ದು, ಅದಕ್ಕೆ ಅವರ ಸಹೋದರಿ ಪ್ರಮೀಳಾ ಸಹಮತ ವ್ಯಕ್ತಪಡಿಸಿದ್ದಾರೆ.
ಅದರಂತೆ ಪ್ರಶಾಂತ್‌ನ ಕಿಡ್ನಿ ಮತ್ತು ಲಿವರ್‌ಗಳನ್ನು ಪಡೆದು ಸುರಕ್ಷಿತವಾಗಿ ಮಂಗಳೂರು ಮತ್ತು ಬೆಂಗಳೂರಿಗೆ ಸಾಗಿಸಲಾಯಿತು.ಪ್ರಶಾಂತ್ ಅವಿವಾಹಿತರಾಗಿದ್ದರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.ಅಪಘಾತಕ್ಕೆ ಕಾರಣರಾದ ಟ್ರಕ್ ಚಾಲಕ ಜಗನ್ನಾಥ್ ವಿರುದ್ಧ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow us on Social media