ಕಲಬುರಗಿ : ಬಹು ನಿರೀಕ್ಷಿತ ‘ಗೃಹ ಜ್ಯೋತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರು ಶನಿವಾರ ಅಧಿಕೃತ ಚಾಲನೆ ನೀಡಿದರು.
ನೂತನ ವಿದ್ಯಾಲಯ (ಎನ್‌ವಿ) ಮೈದಾನದಲ್ಲಿ ಶನಿವಾರ ಇಂಧನ ಇಲಾಖೆ ಹಾಗೂ ಜೆಸ್ಕಾಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ‘ಗೃಹ ಜ್ಯೋತಿ’ ಯೋಜನೆ ಉದ್ಘಾಟನೆಗಾಗಿ ವೇದಿಕೆಯ ಮೇಲೆ ನಿರ್ಮಿಸಲಾದ ಮಾದರಿ ಮನೆಯ ವಿದ್ಯುತ್ ದೀಪ ಬೆಳಗಿಸುವ ಮೂಲಕ ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.
ಒಂದು ಕೋಟಿ 42 ಲಕ್ಷ ಜನರು ಗೃಹಜೋತಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ. ಗೃಹಜೋತಿ ನೋಂದಣಿಗೆ ಕಡೆಯ ದಿನಾಂಕವೆಂದೇನೂ ಇಲ್ಲ. ಉಚಿತವಾಗಿ ನೀಡುವುದು ಉಡುಗೊರೆಯಲ್ಲ. ಬದಲಾಗಿ ಜನರ ಆರ್ಥಿಕ ಸ್ಥಿತಿ ಸುಧಾರಿಸವ ಪ್ರಯತ್ನವಾಗಿದೆ. ಸಾಮಾನ್ಯ ಜನರಿಗೆ ಹಣ ಉಳಿದರೆ, ಅವರು ಬೇರೆ ರೂಪದಲ್ಲಿ ಹಣ ಖರ್ಚು ಮಾಡುತ್ತಾರೆ. ಇದರಿಂದ ಸರ್ಕಾರಕ್ಕೆ ಮತ್ತೆ ತೆರಿಗೆ ಬರಲಿದೆ. ಕರ್ನಾಟಕ ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಕೈ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಹಾಗೆಯೇ ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೂಡಾ ಗೆಲ್ಲಿಸಬೇಕು ಎಂದು ತಿಳಿಸಿದರು.
Follow us on Social media