ಉಡುಪಿ: ಫೇಸ್‌ಬುಕ್ ಮೂಲಕ ಪರಿಚಯವಾದ ಕಟಪಾಡಿಯ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ನಡೆಸಿ, ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದಲ್ಲಿ ಕಾರ್ಕಳ ಕುಕ್ಕುಂದೂರು ನಿವಾಸಿ ಸುಕೇಶ್ ಪುತ್ರನ್ ಎಂಬಾತನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆಗೆ 2018ರಲ್ಲಿ ಆರೋಪಿಯ ಪರಿಚಯವಾಗಿತ್ತು. ಬಳಿಕ ಆತ ಮದುವೆ ಭರವಸೆ ನೀಡಿ ವಿವಿಧ ಲಾಡ್ಜ್ಗಳಿಗೆ ಕರೆದೊಯ್ದು ದೈಹಿಕ ಸಂಪರ್ಕ ನಡೆಸಿ ವಿದೇಶಕ್ಕೆ ತೆರಳಿದ್ದ. ವಿದೇಶದಿಂದ ಮರಳಿದ ಬಳಿಕ ಜನವರಿಯಿಂದ ಫೆಬ್ರವರಿ ನಡುವೆ ಮತ್ತೆ ದೈಹಿಕ ಸಂಪರ್ಕ ಬೆಳೆಸಿದ್ದ. ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ತಿಳಿಸಿದ್ದ ಆತ ಅದಕ್ಕೂ ನಿರಾಕರಿಸಿದ್ದ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಳು.
ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಸುಕೇಶ್ ಪುತ್ರನ್ ಎಂಬಾತನನ್ನು ಬಂಧಿಸಿದ್ದಾರೆ.
Follow us on Social media