ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು-ಕಲ್ಲಾಪು ಸಮೀಪದ ನೇತ್ರಾವತಿ ನದಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಮಾ.17ರ ಸೋಮವಾರ ನಡೆದಿದೆ.
ಐವರು ಯುವಕರಿದ್ದ ಕಾರು 15 ಫೀಟ್ ಆಳಕ್ಕೆ ಉರುಳಿ ಬಿದ್ದಿದ್ದು, ತಲಪಾಡಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಐವರು ಯುವಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣ ದಾಖಲಾಗಿದೆ.
Follow us on Social media