ಉಡುಪಿ: ಬಾರಕೂರು ಕಚ್ಚಾರು ಗ್ರಾಮದ ಸಂತೋಷ್(42) ಮರ್ಮಾಂಗವನ್ನು ಕೊಯ್ದುಕೊಂಡು ಮೃತಪಟ್ಟಿದ್ದಾರೆ.
ಸಂತೋಷ್ ಸರಿಯಾಗಿ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದು, ವಿಪರೀತ ಮದ್ಯಪಾನ ಮಾಡುತ್ತಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. 3-4ದಿನಗಳಿಂದ ಮದ್ಯಪಾನ ಮಾಡಿಕೊಂಡು ಬಂದು, ತಾನು ಸಾಯುತ್ತೇನೆ, ಬದುಕುವುದಿಲ್ಲವೆಂದು ಹೇಳುತ್ತಿದ್ದರು ಎನ್ನಲಾಗಿದೆ.
ರವಿವಾರ ಮನೆಯ ಬಚ್ಚಲು ಕೋಣೆಯಲ್ಲಿ ಅಂಗಾತನೆ ಬಿದ್ದುಕೊಂಡಿದ್ದು, ಮರ್ಮಾಂಗದಿಂದ ರಕ್ತ ಸುರಿಯುತ್ತಿತ್ತು. ತಕ್ಷಣ ಚಿಕಿತ್ಸೆಗೆ ಬ್ರಹ್ಮಾವರದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರು ಪರೀಕ್ಷಿಸಿ ಸಂತೋಷ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media