ಉಡುಪಿ: ಬೀಡಿನಗುಡ್ಡೆ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಕ್ಯಾಂಡಲ್ ಹಚ್ಚಿಕೊಂಡು ಇಸ್ಪೀಟು, ಜುಗಾರಿ ಆಟವಾಡುತ್ತಿದ್ದ 7 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಆಟಕ್ಕೆ ಬಳಸಿದ 32,800ರೂ. ನಗದು ಸಹಿತ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
Follow us on Social media