ಉಡುಪಿ: ಕಾರ್ಕಳ ಕಡೆಯಿಂದ ಪಡುಬಿದ್ರಿ ಜಂಕ್ಷನ್ ಕಡೆಗೆ ಬಂದ ಟಿಪ್ಪರನ್ನು ರಾತ್ರಿ ಗಸ್ತು ನಿರತ ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಅವರು ನಿಲ್ಲಿಸಲು ಸೂಚನೆ ನೀಡಿದರೂ ಸ್ಪಂದಿಸದೆ ಮುಂದೆ ಸಾಗಿದ್ದು, ಅದನ್ನು ಹೆದ್ದಾರಿಯ ಭಾರತ್ ಪೆಟ್ರೋಲ್ ಬಂಕ್ ಮುಂದೆ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ.
ಟಿಪ್ಪರನ್ನು ಪರಿಶೀಲಿಸಿದಾಗ ಅದರಲ್ಲಿ ಸುಮಾರು 3 ಯುನಿಟ್‌ಗಳಷ್ಟು ಸುಮಾರು 10 ಸಾ. ರೂ. ಬೆಲೆ ಬಾಳುವ ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದು ಪತ್ತೆಯಾಗಿದೆ. ಮರಳನ್ನು ವಾಹನ ಸಹಿತ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow us on Social media