ಉಡುಪಿ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯ ಬಿಡುಗಡೆಗೆ ಆಕ್ಷೇಪಣೆ ಸಲ್ಲಿಕೆ ಸಂಬಂಧ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಉಡುಪಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ವಸಂತ ನಾಯ್ಕ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಗಣಪತಿ ವಸಂತ ನಾಯ್ಕ ಅವರು 3 ಸಾವಿರ ರೂ.ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಲಂಚ ನೀಡಲು ಒಪ್ಪದ ದೂರುದಾರ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಉಡುಪಿ ನ್ಯಾಯಾಲಯದಲ್ಲಿರುವ ಕಚೇರಿಯಲ್ಲಿ 2 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Follow us on Social media