ಉಡುಪಿ: ನಗರದ ಖಾಸಗಿ ಸ್ಥಳದಲ್ಲಿದ್ದ ಮರದ ಕೊಂಬೆಗೆ ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ವ್ಯಕ್ತಿ ಮೃತಪಟ್ಟು ಎರಡು ತಿಂಗಳು ಕಳೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಶವವು ಸಂಪೂರ್ಣ ಕೊಳೆತು ಅಸ್ಥಿಪಂಜರ ಮಾತ್ರ ಉಳಿದುಕೊಂಡಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ವಾರಸುದಾರರು ನಗರ ಪೋಲಿಸ್ ಠಾಣೆಯ ನಾಗರೀಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ನಗರ ಪೋಲಿಸ್ ಠಾಣೆಯ ತನಿಖಾಧಿಕಾರಿ ಈರಣ್ಣ, ಎ ಎಸ್ ಐ ಹರೀಶ್, ಜಾಸ್ವ ಘಟನಾ ಸ್ಥಳದಲ್ಲಿದ್ದು ಮಹಜರು ಪ್ರಕ್ರಿಯೆ ನಡೆಸಿದರು.
Follow us on Social media