ಬೆಂಗಳೂರು: ಕರ್ನಾಟಕದ ಒಳನಾಡಿನಲ್ಲಿ ಟ್ರಫ್ 0.9 ಕಿ.ಮೀ. ಎತ್ತರದವರೆಗೆ ಇದೆ. ಇದರ ಪ್ರಭಾವದಿಂದ ಮುಂದಿನ 7 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಉಡುಪಿ ಜಿಲ್ಲೆಗಳ ಕೆಲವು ಕಡೆ ಹಗುರವಾಗಿ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ.
ಮಾರ್ಚ್ 28ರಂದು ಮೈಸೂರು, ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ. ಇನ್ನು ಮಾರ್ಚ್ 29ರಂದು ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Follow us on Social media