ಮಂಗಳೂರು: ಕರ್ನಾಟಕದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ. ಆದರೆ 100 ಪರ್ಸೆಂಟ್ ರಿಸಲ್ಟ್‌ಗಾಗಿ ಆಸೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಯೊಂದು ಎಡವಟ್ಟು ಮಾಡಿಕೊಂಡಿದೆ. ಇಬ್ಬರು ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯರನ್ನ ಪರೀಕ್ಷೆಗೆ ಕೂರಿಸದೇ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಿದೆ. ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣ ನೀಡಿ ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಅವಕಾಶವೇ ಕೊಟ್ಟಿಲ್ಲವಂತೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಪ್ರೌಢಶಾಲೆಯೊಂದು, ಮಕ್ಕಳ ಭವಿಷ್ಯದ ಜತೆ ಚೆಲ್ಲಾಟವಾಡಿದೆ. ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂಬ ಕಾರಣ ನೀಡಿ ಇಬ್ಬರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ.
ಮುಖ್ಯ ಶಿಕ್ಷಕರು 100 ಪರ್ಸೆಂಟ್ ಫಲಿತಾಂಶ ದಾಖಲಿಸಬೇಕೆಂಬ ದುರುದ್ದೇಶದಿಂದಲೇ ಓದೋದರಲ್ಲಿ ಹಿಂದುಳಿದ ಇಬ್ಬರು ವಿದ್ಯಾರ್ಥಿನಿಯರಿಗೆ ಹಾಲ್ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ನಮ್ಮ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಇತ್ತ ವಿದ್ಯಾರ್ಥಿನಿಯರು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಿಡಿಪಿಐ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ರಾಜ್ಯ ಎಸ್ಡಿಎಂಸಿ ಸಮನ್ವಯ ವೇದಿಕೆಗೆ ಪತ್ರ ಬರೆದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಶಾಲೆಗೆ ಭೇಟಿ ನೀಡಿದ್ದ ಬಿಇಓ ಹಾಲ್ ಟಿಕೆಟ್ ಕೊಡಿಸಿದ್ದು, ಉಳಿದ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಅಲ್ಲದೆ ಈ ಬಗ್ಗೆ ತನಿಖೆ ನಡೆಸುವುದಾಗಿ ಬಿಇಓ ಹೇಳಿದ್ದಾರೆ.
Follow us on Social media