ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಗೊತ್ತಿಲ್ಲದೆ ಇಲಿ ಪಾಷಣ ಸೇವಿಸಿ ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ.
ಮಲ್ಪೆಯ ನಿವಾಸಿ ಸರೋಜಾ (51) ಮೃತರು. 2 ವರ್ಷಗಳಿಂದ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದ ಅವರು ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ಅವರು ಮನೆಯಲ್ಲಿ ತಂದಿಟ್ಟಿದ್ದ ಇಲಿ ಪಾಷಾಣವನ್ನು ತಿಳಿಯದೇ ಸೇವಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿ ದ್ದಾರೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media