Breaking News

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಮುತ್ತಿಕ್ಕಿದ ಯುವಕ!

ಮಂಗಳೂರು: ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್​ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೋರ್ವ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಮುತ್ತು ಕೊಟ್ಟಿದ್ದಾನೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿ ಶಾಫಿ ಬೆಳ್ಳಾರೆ ಈಗಾಗಲೇ ಎನ್​ಐಎಯಿಂದ ಬಂಧನವಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದ್ರೆ, 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಅವಹೇನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಡಿ ವಾರೆಂಟ್​ ಮೇಲೆ ಪೊಲೀಸರು ಶಾಫಿ ಬೆಳ್ಳಾರೆಯನ್ನ ಕರೆದುಕೊಂಡು ಬಂದು ಬೆಳ್ತಂಗಡಿ ಕೋರ್ಟ್​ಗೆ ಹಾಜರುಪಡಿಸಿದರು. ಈ ವೇಳೆ ಈ ಮುತ್ತು ಕೊಟ್ಟಿರುವ ಘಟನೆ ನಡೆದಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×