ಉಡುಪಿ: ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಸಹೋದರಿಯರಾದ ಮಂಜುಳಾ (24) ಮತ್ತು ಮಲ್ಲಿಕಾ (18) ಎ. 3ರಂದು ಮನೆಯಿಂದ ಹೊರಗೆ ಹೋದವರು ವಾಪಸ್ ಬಾರದೆ ನಾಪತ್ತೆಯಾಗಿರುವ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಜುಳಾ ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ವಿವಾಹತೆಯಾಗಿರುವ ಆಕೆ ಕಳೆದ ಎರಡು ವರ್ಷಗಳಿಂದ ತವರು ಮನೆಯಲ್ಲಿ ವಾಸವಾಗಿದ್ದರು.
ಮಲ್ಲಿಕಾ ಎಣ್ಣೆಗಪ್ಪು ಮೈಬಣ್ಣ ಸಾಧಾರಣ ಶರೀರ ಹೊಂದಿದ್ದು ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಮಾಹಿತಿ ದೊರೆತಲ್ಲಿ ಹಿರಿಯಡಕ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.
Follow us on Social media