Breaking News

ಉಡುಪಿ: ಪಕ್ಷ ವಿರೋಧಿ ಚಟುವಟಿಕೆ : ಬಿಜೆಪಿಯಿಂದ ಇಬ್ಬರು 6 ವರ್ಷ ಉಚ್ಚಾಟನೆ!

ಉಡುಪಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(ಕೆಎಂಎಫ್) ಚುನಾವಣೆಯಲ್ಲಿ ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಸ್ಪರ್ಧಿಸುರುತ್ತಿರುವ ಇಬ್ಬರನ್ನು ಜಿಲ್ಲಾ ಬಿಜೆಪಿ ಮುಂದಿನ 6 ವರ್ಷಗಳಿಗೆ ಅನ್ವಯವಾಗುವಂತೆ ಉಚ್ಛಾಟನೆ ಮಾಡಿದೆ.

ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕಾರ್ಕಳದ ಉದಯ ಕೋಟ್ಯಾನ್‌ ಹಾಗೂ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಪೇತ್ರಿ ಕನ್ನಾರು ಕಮಲಾಕ್ಷ ಹೆಬ್ಬಾರ್‌ ಅವರು ಕೆಎಂಎಫ್ ಚುನಾವಣೆಯಲ್ಲಿ ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಸ್ಪರ್ಧೆ ಮಾಡುತ್ತಿರುವುದರಿಂದ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ತಿಳಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×