ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಏ.28ರ ವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಏ.23 ಹಾಗೂ 24ರಂದು ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಮಂಡ್ಯ, ಬೆಳಗಾವಿ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ 40 ಕಿ.ಮೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಗಳಿವೆ.
ಏ.25ರಂದು ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬೆಳಗಾವಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಪ್ರತಿ ಗಂಟೆಗೆ 40 ಕಿ.ಮೀ. ಗಾಳಿಯೊಂದಿಗೆ ಲಘು ಮಳೆಯಾಗುವ ಸಾಧ್ಯತೆಗಳಿವೆ.
ಏ.25ರಂದು ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬೆಳಗಾವಿ, ರಾಯಚೂರು, ಬಾಗಲಕೋಟೆ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆಯಾದರೆ, ಏ.26ರಂದು ರಾಯಚೂರು, ಕೊಪ್ಪಳ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಪ್ರತಿ ಗಂಟೆಗೆ 40 ಕಿ.ಮೀ ಗಾಳಿಯೊಂದಿಗೆ ಮಳೆಯಾದರೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.
ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 34 ಹಾಗೂ 22 ಡಿಸೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Follow us on Social media