ಮಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್ ಹಾಕಿದ್ದ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲದ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಬಿಎನ್ಎಸ್ ಸೆಕ್ಷನ್ 192 ಮತ್ತು 353(1)(,b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್ಬುಕ್ ಪೇಜ್ನ ಡಿಪಿಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ನಿಚ್ಚು ಮಂಗಳೂರು ಎಂಬ ಫೇಸ್ಬುಕ್ ಪೇಜ್ನಲ್ಲಿ, “2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ” ಎಂದು ಪೋಸ್ಟ್ ಹಾಕಲಾಗಿದೆ. ಈ ಪೋಸ್ಟ್ಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow us on Social media