ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಮಗುವೊಂದಕ್ಕೆ ಅರ್ಧ ಟಿಕೆಟ್ ತೆಗೆಯುವ ವಿಚಾರವಾಗಿ ನಿರ್ವಾಹಕ ಟಿಕೆಟ್ ಯಂತ್ರದಲ್ಲಿ ಮಹಿಳೆಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಾಗ್ವಾದ ನಡೆದು ಬಳಿಕ ಬಿ.ಸಿ.ರೋಡಿನಲ್ಲಿ ಪೊಲೀಸರು ಮಾತುಕತೆ ನಡೆಸಿ ಬಸ್ಸನ್ನು ಕಳುಹಿಸಿಕೊಟ್ಟ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಮಹಿಳೆಯು ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಬಸ್ಸನ್ನು ನಿಲ್ಲಿಸುವಂತೆ ಆಗ್ರಹಿಸಿದರು. ಆದರೆ ಚಾಲಕ ಬಸ್ಸನ್ನು ನಿಲ್ಲಿಸದೇ ಇದ್ದು, ಬಳಿಕ ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಬಂಟ್ವಾಳ ನಗರ ಪೊಲೀಸರಿಗೆ ಮಾಹಿತಿ ನೀಡಿದರು.
ಬಂಟ್ವಾಳ ನಗರ ಠಾಣಾ ಪಿಎಸ್‌ಐ ರಾಮಕೃಷ್ಣ ಹಾಗೂ ಸಿಬ್ಬಂದಿ ಬಸ್ಸನ್ನು ಬಿ.ಸಿ.ರೋಡು ನಿಲ್ದಾಣದಲ್ಲಿ ನಿಲ್ಲಿಸಿ ವಿಚಾರಣೆ ನಡೆಸಿದರು ಎಂದು ತಿಳಿದು ಬಂದಿದೆ.
Follow us on Social media