ಮಂಜೇಶ್ವರ: ಬೈಕ್ನಲ್ಲಿ ತೆರಳುತಿದ್ದ ಯುವ ಅಡಿಕೆ ವ್ಯಾಪಾರಿಗೆ ಗುಂಡೇಟು ತಗಲಿರುವ ಘಟನೆ ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಾಟಕ ಗಡಿಭಾಗ ಮುಡಿಪು ಸಮೀಪದ ಕಜೆಪದವು ಎಂಬಲ್ಲಿ ಸಂಭವಿಸಿದೆ.
ಬಾಕ್ರಬೈಲ್ ನಡೀಬೈಲು ನಿವಾಸಿ ಸವಾದ್ (20) ಎಂಬಾತನ ಮೇಲೆ ಶೂಟೌಟ್ ನಡೆದಿದೆ. ನಿನ್ನೆ ಸಂಜೆ ವೇಳೆ ಬೈಕ್ ನಲ್ಲಿ ಮನೆ ಕಡೆಗೆ ತೆರಳುವ ಸಂದರ್ಭ ಕಜೆಪದವು ತಿರುವಿನಲ್ಲಿ ಈ ಶೂಟೌಟ್ ನಡೆದಿದೆ.
ಕಾಲಿಗೆ ಗಂಭೀರ ಗಾಯಗೊಂಡ ಸವಾದ್ ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಜೇಶ್ವರ ಠಾಣಾ ಪೊಲೀಸರು ಕೇಸು ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಜಿಲ್ಲಾ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಮತ್ತಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Follow us on Social media