ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ಇದುವರೆಗೂ ಭಾಗವಹಿಸಿದ ಎಲ್ಲಾ ಋತುಗಳಲ್ಲಿ ಪ್ಲೇ-ಆಫ್ಸ್‌ಗೆ ಅರ್ಹತೆ ಪಡೆಯುವಲ್ಲಿ ಸಫಲವಾಗಿದೆ. ಆದರೆ, ಈ ಆವೃತ್ತಿಯಲ್ಲಿನಾಕೌಟ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ. ಇಲ್ಲಿಯವರೆಗೂ ಆಡಿದ 12 ಪಂದ್ಯಗಳಲ್ಲಿ ಕೇವಲ 4ರಲ್ಲಿ ಮಾತ್ರ ಸಾಧಿಸಿ ಪಾಯಿಂಟ್ಸ್ ಟೇಬಲ್‌ನಲ್ಲಿ ಕೊನೆಯ ಸ್ಥಾನದಲ್ಲಿದೆ.
ಐಪಿಎಲ್ 45ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಈ ಹಿನ್ನೆಲೆಯಲ್ಲಿ ಚೆನ್ನ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಹಾದಿ ಸಂಪೂರ್ಣ ಬಂದ್ ಆಯಿತು. ಚೆನ್ನೈ ನಾಯಕ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಎಲ್ಲ ಹಿರಿಯ ಆಟಗಾರರು ಈ ಋತುವಿನಲ್ಲಿ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದಾರೆ. ಧೋನಿ 12 ಪಂದ್ಯಗಳಲ್ಲಿ ಕೇವಲ 199 ರನ್‌ಗಳನ್ನು ಗಳಿಸಿದ್ದು, 118.45 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಹೀಗಾಗಿ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಧೋನಿ ನಾಯಕನಾಗಿ ಮುಂದುವರಿಯುವುದಿಲ್ಲ ಎಂದು ವ್ಯಾಪಕ ವದಂತಿಗಳಿವೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಚೆನ್ನೈ ಸೂಪರ್ ಕಿಂಗ್ಸ್ ಸಿಇಓ ಕಾಶಿ ವಿಶ್ವನಾಥನ್, “ಧೋನಿ 2021ರಲ್ಲೂ ಚೆನ್ನೈ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಧೋನಿ 2021ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ನಾನು ದೃಢವಾಗಿ ನಂಬುತ್ತೇನೆ. ಅವರ ನಾಯಕತ್ವದಲ್ಲಿ ಸಿಎಸ್‌ಕೆ ಮೂರು ಬಾರಿ ಪ್ರಶಸ್ತಿಯನ್ನು ಗೆದ್ದಿದೆ. ಇದೇ ಮೊದಲ ಬಾರಿ ಧೋನಿ ನಾಯಕತ್ವದಲ್ಲಿ ಚೆನ್ನೈ ಪ್ಲೇ-ಆಫ್ಸ್ ಸುತ್ತಿಗೆ ಅರ್ಹತೆ ಪಡೆಯಲು ಸಾಧ್ಯವಾಗಿಲ್ಲ. ಒಂದು ಋತುವಿನಲ್ಲಿ ವಿಫಲವಾಗಿದ್ದಕ್ಕೆ ನಾವು ಎಲ್ಲವನ್ನೂ ಬದಲಾಯಿಸಬೇಕು ಎಂದು ಯೋಚಿಸುವುದು ತಪ್ಪು. ನಾವು ಅದನ್ನು ಮಾಡುವುದಿಲ್ಲ ಎಂದು ಹೇಳಿದರು.
ಸುರೇಶ್ ರೈನಾ ಮತ್ತು ಹರಭಜನ್ ಸಿಂಗ್ ಈ ಋತುವಿನಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ, ನಾವು ಗೆಲ್ಲಬೇಕಾದ ಕೆಲವು ಪಂದ್ಯಗಳನ್ನು ಕಳೆದುಕೊಂಡೆವು. ಮುಂದಿನ ವರ್ಷ ನಮ್ಮ ತಂಡ ಮತ್ತೆ ಬಲಿಷ್ಠವಾಗಲಿದೆ ಎಂದು ವಿಶ್ವನಾಥನ್ ಹೇಳಿದರು. 2021ರಲ್ಲಿ ಧೋನಿ ಮತ್ತೆ ನಾಯಕನಾಗಿ ಅಧಿಕಾರ ವಹಿಸಿಕೊಂಡರೆ ತಂಡದಲ್ಲಿ ಹಲವು ಬದಲಾವಣೆಗಳಾಗಬಹುದು ಎಂದು ಸಿಎಸ್‌ಕೆ ತರಬೇತುದಾರ ಸ್ಟೀಫನ್ ಫ್ಲೆಮಿಂಗ್ ಹೇಳಿದ್ದಾರೆ. ಋತುರಾಜ್ ಗಾಯಕ್ವಾಡ್ ಅವರಂಥ ಯುವ ಆಟಗಾರರಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.
Follow us on Social media