ನವದೆಹಲಿ: ಏಷ್ಯಾಕಪ್ 2020 ರದ್ದತಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರು ಪ್ರಕಟಿಸಿದ್ದಾರೆ.
ಜುಲೈ 9 ರಂದು ನಡೆಯಲಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಸಭೆಯ ಮುನ್ನ ಗಂಗೂಲಿ ಈ ಘೋಷಣೆ ಮಾಡಿದ್ದಾರೆ. ಆದರೆ, ಎಸಿಸಿ ಈ ನಿರ್ಧಾರ ತೆಗೆದುಕೊಂಡಿದೆಯೇ ಎಂದು ಅವರು ಹೇಳಲಿಲ್ಲ.
ಎಸಿಸಿ ಅಧ್ಯಕ್ಷ ನಜ್ಮುಲ್ ಹಸನ್ ಏಷ್ಯಾಕಪ್ 2020 ಕುರಿತು ಯಾವುದೇ ಹೇಳಿಕೆ ನೀಡಿದಿದ್ದರೂ ಬಿಸಿಸಿಐ ಅಧ್ಯಕ್ಷ ಗಂಗೂಲಿ ಸ್ಪೋರ್ಟ್ಸ್ ತಕ್ ಜೊತೆ ಮಾಡನಾಡುತ್ತಾ ಈ ವಿಷಯವನ್ನು ದೃಢಪಡಿಸಿದ್ದಾರೆ.
ವಿಶ್ವದಾದ್ಯಂತ ಕೊರೋನಾ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದ್ದು ಈ ಹಿನ್ನೆಲೆಯಲ್ಲಿ ಏಷ್ಯಾಕಪ್ ಟೂರ್ನಿಯನ್ನು ರದ್ದು ಮಾಡಲಾಗಿದೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಆತಿಥ್ಯದಲ್ಲಿ ಇದೇ ಸೆಪ್ಟೆಂಬರ್ ನಲ್ಲಿ ಯುಎಇಯಲ್ಲಿ ಏಷ್ಯಾಕಪ್ ಟೂರ್ನಿ ನಿಗದಿಯಾಗಿತ್ತು.
Follow us on Social media