ಕಡಬ : ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕೋಡಿಂಬಾಳದಲ್ಲಿ ಗುರುವಾರ ಸಂಜೆ ನಡೆದಿದೆ.
ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪದ ಮುರಚೆಡವು ಎಂಬಲ್ಲಿ ಈ ಅಪಘಾತ ನಡೆದಿದೆ.
ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪಂಜ ನಿವಾಸಿ ನವೀನ್ ಎಂಬವರ ಪುತ್ರ ಕಡಬದ ವಿದ್ಯಾನಗರ ಸರಸ್ವತೀ ವಿದ್ಯಾಲಯದ ಶಿಶು ಮಂದಿರದ ವಿದ್ಯಾರ್ಥಿ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದರು.
ಕೂಡಲೇ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
Follow us on Social media